This is the title of the web page
This is the title of the web page

Live Stream

June 2024
S M T W T F S
 1
2345678
9101112131415
16171819202122
23242526272829
30  

| Latest Version 9.4.1 |

Sports News

ಆರ್​ಸಿಬಿ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ ವಿರಾಟ್ ಕೊಹ್ಲಿ , ನಿಮ್ಮ ಬೆಂಬಲಕ್ಕೆ ನಾನು ಎಂದೆಂದಿಗೂ ಕೃತಜ್ಞನಾಗಿರುತ್ತೀನಿ..!

ಐಪಿಎಲ್ ಸೀಸನ್ 17 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊರಬಿದ್ದಿದ್ದು, ಈ ಬಾರಿಯ ಟೂರ್ನಿಯಲ್ಲಿ ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದಿದ್ದ ಆರ್​ಸಿಬಿ ತಂಡಕ್ಕೆ ನಿರೀಕ್ಷಿತ ಆರಂಭ ಸಿಕ್ಕಿರಲಿಲ್ಲ. ಅಲ್ಲದೆ ಮೊದಲಾರ್ಧದ 7 ಪಂದ್ಯಗಳಲ್ಲಿ 6 ರಲ್ಲಿ ಸೋಲನುಭವಿಸಿತ್ತು.

ಈ ಸೋಲಿನ ನೋವಿನ ನಡುವೆಯೂ ವಿರಾಟ್ ಕೊಹ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಟೂರ್ನಿಯುದ್ಧಕ್ಕೂ ಬೆಂಬಲ ನೀಡಿರುವ ನಮ್ಮ ಫ್ಯಾನ್ಸ್​ಗೆ ನಾನು ಕೃತಜ್ಞನಾಗಿರುತ್ತೀನಿ ಎಂದು ಕಿಂಗ್ ಕೊಹ್ಲಿ ಹೇಳಿದ್ದಾರೆ.

ಈ ಬಾರಿ ನಾವು ಉತ್ತಮ ಆರಂಭ ಪಡೆದಿರಲಿಲ್ಲ. ಆದರೆ ಎಂದಿನಂತೆ ಈ ಸಲ ಕೂಡ ನಮ್ಮ ಅಭಿಮಾನಿಗಳ ಬೆಂಬಲ ಅಚಲವಾಗಿತ್ತು. ನಾವು ಸೋತರೂ, ಗೆದ್ದರೂ ಅವರ ಪ್ರೀತಿ ಭಿನ್ನವಾಗಿರಲಿಲ್ಲ. ಇಡೀ ಸೀಸನ್​ನಲ್ಲಿ ಅವರ ಬೆಂಬಲವು ಅಚಲವಾಗಿತ್ತು.

ತವರು ಮೈದಾನದಲ್ಲಿ ಮಾತ್ರವಲ್ಲದೆ ಇತರೆ ಸ್ಟೇಡಿಯಂನಲ್ಲೂ ನೀವು ಅಪಾರ ಸಂಖ್ಯೆಯಲ್ಲಿ ಬೆಂಬಲ ನೀಡಿದ್ದೀರಿ. ನಿಮ್ಮ ಈ ಅಭೂತಪೂರ್ವ ಬೆಂಬಲಕ್ಕಾಗಿ ನಾನು ಎಂದೆಂದಿಗೂ ಕೃತಜ್ಞನಾಗಿರುತ್ತೀನಿ. ನಿಮ್ಮ ಬೆಂಬಲ ಮತ್ತು ಹಾರೈಕೆಗೆ ತುಂಬಾ ಹೃದಯದ ಧನ್ಯವಾದಗಳು ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

ದ್ವಿತೀಯಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆರ್​ಸಿಬಿ 7 ಮ್ಯಾಚ್​ಗಳಲ್ಲಿ 6 ರಲ್ಲಿ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿ ಪ್ಲೇಆಫ್​ಗೆ ಪ್ರವೇಶಿಸಿತು. ಆದರೆ ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತು ಇದೀಗ ಐಪಿಎಲ್ ಅಭಿಯಾನ ಅಂತ್ಯಗೊಳಿಸಿದೆ.