ಬೆಂಗಳೂರು: ವೆಸ್ಟ್ ಇಂಡೀಸ್ ಹಾಗೂ ಅಮೇರಿಕಾದ ಜಂಟಿ ಆತಿಥ್ಯದಲ್ಲಿ ಜೂನ್ 1 ರಿಂದ ನಡೆಯಲಿರುವ 2024ರ ಚುಟುಕು ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಕ್ಲಾಸ್ ಆಟಗಾರ ವಿರಾಟ್ ಕೊಹ್ಲಿ ಸ್ಥಾನ ಪಡೆದೇ ಪಡೆಯುತ್ತಾರೆ ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮಾಜಿ ನಾಯಕ ಸುನೀಲ್ ಗವಾಸ್ಕರ್ ಹೇಳಿದರು.
ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಅವರು ರನ್ ಸುರಿಮಳೆ ಸುರಿಸುತ್ತಾರೆ ಎಂದು ಭವಿಷ್ಯ ನುಡಿದಿದ್ದು, 2022ರ ಟಿ20 ವಿಶ್ವಕಪ್ ಟೂರ್ನಿಯ ನಂತರ ಚುಟುಕು ಕ್ರಿಕೆಟ್ ನಿಂದ ದೂರ ಉಳಿದಿದ್ದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇತ್ತೀಚೆಗೆ ಅಫಘಾನಿಸ್ತಾನ ವಿರುದ್ಧ ನಡೆದ 3 ಪಂದ್ಯಗಳ ಟಿ20-ಐ ಸರಣಿ ಮೂಲಕ ಕಮ್ ಬ್ಯಾಕ್ ಮಾಡಿದ್ದರು ಎಂದರು.
ಹಿಟ್ ಮ್ಯಾನ್ ರೋಹಿತ್ ಶರ್ಮಾ ಕೊನೆಯ ಪಂದ್ಯದಲ್ಲಿ ಸ್ಫೋಟಕ ಶತಕ ಸಿಡಿಸಿ (121* ರನ್) ಗಮನ ಸೆಳೆದರೆ, ವೈಯಕ್ತಿಕ ಕಾರಣಕ್ಕಾಗಿ ಮೊದಲ ಪಂದ್ಯದಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ, ಎರಡನೇ ಪಂದ್ಯದಲ್ಲಿ 29 ರನ್ ಗಳಿಸಿದರೂ, ಅಂತಿಮ ಪಂದ್ಯದಲ್ಲಿ ಗೋಲ್ಡನ್ ಡಕೌಟ್ ಆಗಿ ನಿರಾಸೆ ಮೂಡಿಸಿದ್ದು, ಸ್ಟಾರ್ ಸ್ಪೋರ್ಟ್ಸ್ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಲಿಟ್ಲ್ ಮಾಸ್ಟರ್ ಸುನೀಲ್ ಗವಾಸ್ಕರ್ ಅವರಿಗೆ ವಿರಾಟ್ ಕೊಹ್ಲಿ ಅವರು ಐಪಿಎಲ್ ಟೂರ್ನಿಯಲ್ಲಿ ತಮ್ಮ ಸಾಮರ್ಥ್ಯ ತೋರಿಸಿದರು ಎಂದರು.
ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸ್ಥಾನ ಪಡೆದು ತಂಡದ ಬ್ಯಾಟಿಂಗ್ ಬಲ ಹೆಚ್ಚಿಸುತ್ತಾರಾ ಎಂಬ ಪ್ರಶ್ನೆ ಕೇಳಲಾಗಿದ್ದು, ಚುಟುಕು ವಿಶ್ವಕಪ್ ಟೂರ್ನಿಗೂ ಮುನ್ನ ಟೀಮ್ ಇಂಡಿಯಾ ಆಟಗಾರರು ಯಾವುದೇ ಅಂತಾರಾಷ್ಟ್ರೀಯ ಚುಟುಕು ಸರಣಿಯನ್ನು ಆಡದಿರುವುದರಿಂದ ಐಪಿಎಲ್ ಟೂರ್ನಿಯಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಬೇಕಿದೆ ಎಂದು ವಿವರಿಸಿದರು.