ಹುಬ್ಬಳ್ಳಿ,: ಬಿಜೆಪಿ ಮತ್ತು ಜೆಡಿಎಸ್ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದು, ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಕೇಂದ್ರ ಸಚವ ಪ್ರಲ್ಹಾದ್ ಜೋಶಿ ಹೇಳಿದರು.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಲೋಕಸಭೆ ಚುನಾವಣೆ ಯನ್ನು ಈ ಬಾರಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿ ಎದುರಿಸುತ್ತಿದೆ. ಎರಡೂ ಪಕ್ಷದವರು ಒಂದೆಡೆ ಸೇರಿ ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದಾರೆ. ಅದೇ ರೀತಿಯಾಗಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕೂಡ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆ ಮಾಡಲಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ಕೈಬಲಪಡಿಸುವ ಸಲುವಾಗಿ ಜಾತ್ಯಾತೀತ ಜನತಾದಳ ಪಕ್ಷವು ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಿದ್ದು, ಇಂದು, ಜೆಡಿಎಸ್ ಪ್ರಮುಖರೊಂದಿಗೆ ಸಭೆ ನಡೆಸಲಾಯಿತು ಎಂದು ತಿಳಿಸಿದರು‘
ಮಾಜಿ ಪ್ರಧಾನಮಂತ್ರಿ ಹೆಚ್ಡಿ ದೇವೇಗೌಡ ಅವರ ಮಾರ್ಗದರ್ಶನದಲ್ಲಿ ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರೆಲ್ಲರೂ ಬಿಜೆಪಿಯನ್ನು ಬೆಂಬಲಿಸಿ, ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವ ಭರವಸೆ ನೀಡಿದರು ಎಂದಿದ್ದಾರೆ.
ನಾಡಿನ ರಕ್ಷಣೆ ಮತ್ತು ರಾಷ್ಟ್ರದ ರಕ್ಷಣೆಗೆ ನಾವೆಲ್ಲರೂ ಜೊತೆಗೂಡಿ ಮುಂದುವರಿಯಲಿದ್ದೇವೆ ಎಂಬ ವಿಶ್ವಾಸದೊಂದಿಗೆ, ನೆರೆದಿದ್ದ ಎಲ್ಲಾ ಕಾರ್ಯಕರ್ತರಿಗೆ ವಿಕಸಿತ ಭಾರತದ ಪರಿಕಲ್ಪನೆಯ ಬಗ್ಗೆ ವಿವರಿಸಿದರು.