ಕಲಬುರಗಿ: ಪ್ರಧಾನಿ ಮೋದಿ ಅವರು ಪ್ರಜ್ವಲ್ ರೇವಣ್ಣ ಅವರ ಕೈ ಹಿಡಿದು ಅವರ ಪರ ಮತಯಾಚನೆ ಮಾಡಿದ್ದಕ್ಕೆ ನಾವು ಪೆನ್ ಡ್ರೈವ್ ವಿಚಾರದಲ್ಲಿ ಪ್ರಧಾನಿಯನ್ನು ಅವರನ್ನು ಪ್ರಶ್ನೆ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಪೆನ್ ಡ್ರೈವ್ ವಿಚಾರದಲ್ಲಿ ಪ್ರಧಾನಮಂತ್ರಿಗಳನ್ನು ಯಾಕೆ ಎಳೆದು ತರುತ್ತೀರಿ ಎಂಬ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಉತ್ತರಿಸಿದ ಅವರು,ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧಿಸಲು ಆಗದಿದ್ದರೆ ಅಧಿಕಾರ ಬಿಟ್ಟು ಹೋಗಲಿ ಎಂಬ ವಿರೋಧ ಪಕ್ಷದ ಆರ್ ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅಶೋಕ್ ಅವರು ವಿರೋಧ ಪಕ್ಷದ ನಾಯಕರು. ಬೇರೆ ವಿಚಾರಗಳಲ್ಲಿ ವಾಗ್ದಾಳಿ ಮಾಡುತ್ತಿದ್ದವರು ಈ ಪ್ರಕರಣಗಳಲ್ಲಿ ಯಾಕೆ ಮಾತನಾಡುತ್ತಿಲ್ಲ ಎಂದರು.
ಅವರು ತಮ್ಮ ಪಕ್ಷದ ಅಧ್ಯಕ್ಷರಾದ ಬಿವೈ ವಿಜಯೇಂದ್ರ, ಶೋಭ ಕರಂದ್ಲಾಜೆ, ಸಿಟಿ ರವಿ, ಸುನೀಲ್ ಕುಮಾರ್ ಸೇರಿದಂತೆ ಪ್ರಮುಖ ನಾಯಕರನ್ನು ಕರೆದುಕೊಂಡು ಹೋಗಿ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಮಹಿಳೆಯರ ಬಗ್ಗೆ ಗೌರವ ಇದೆ ಎನ್ನುವ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಕೂಡ ಸಂತ್ರಸ್ತರ ಮನೆಗೆ ಹೋಗಿ ಧೈರ್ಯ ತುಂಬಬೇಕು ಎಂದು ಹೇಳಿದರು.
ಯಾಕೆ ಭೇಟಿ ಮಾಡುತ್ತಿಲ್ಲ?” ಎಂದು ಪ್ರಶ್ನಿಸಿದ ಅವರು, ಪ್ರಜ್ವಲ್ ರೇವಣ್ಣ ಅವರನ್ನು ಯಾಕೆ ಬಂಧಿಸಿಲ್ಲ, “ಪ್ರಧಾನಿ ನರೇಂದ್ರ ಮೋದಿ ಪ್ರಜ್ವಲ್ ರೇವಣ್ಣ ಪರ ಮತಯಾಚನೆ ಮಾಡಿದ್ದಾರಲ್ಲ. ಅವರದೇ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿರುವ ಕಾರಣ ನಾವು ಪ್ರಧಾನಿಗಳನ್ನು ಪ್ರಶ್ನೆ ಮಾಡುತ್ತಿದ್ದೇವೆ,” ಎಂದು ಸೂಚಿಸಿದರು.