This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ಜನರನ್ನು ಕೇವಲ ಭಾವನಾತ್ಮಕವಾಗಿ ಕೆರಳಿಸಿ ಅವರ ಬದುಕಿಗೆ ಬೆಂಕಿ ಇಡುವ ಕೆಲಸವನ್ನು ನಾವು ಮಾಡುವುದಿಲ್ಲ: ಸಿ ಎಂ ಸಿದ್ದು

ಜನರನ್ನು ಕೇವಲ ಭಾವನಾತ್ಮಕವಾಗಿ ಕೆರಳಿಸಿ ಅವರ ಬದುಕಿಗೆ ಬೆಂಕಿ ಇಡುವ ಕೆಲಸವನ್ನು ನಾವು ಮಾಡುವುದಿಲ್ಲ: ಸಿ ಎಂ ಸಿದ್ದು

ಮೈಸೂರು: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ ಲಕ್ಷ್ಮಣ್‌ ಅವರು ಬುಧವಾರ (ಏ.3) ಮೈಸೂರಿನಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು. ಇವರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಸಾಥ್‌ ನೀಡಿದ್ದರು.

ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಹಾಗು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರಗೆ ನಾಮಪತ್ರ ಸಲ್ಲಿಕೆ ಮಾಡಿದ್ದು, ಸಚಿವ ಕೆ ವೆಂಕಟೇಶ್, ಶಾಸಕ ತನ್ವೀರ್ ಸೇಠ್ ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಸಿದ ಬಳಿಕ ನಡೆದ ಸಾರ್ವಜನಿಕ ಸಭೆಯಲ್ಲಿ ಸಿಎಂ, ಡಿಸಿಎಂ ಮಾತನಾಡಿದರು.ಈ ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಬಿಜೆಪಿ ಮಾಡಿರುವ ನಂಬಿಕೆ ದ್ರೋಹಕ್ಕೆ, ಜನ ದ್ರೋಹಕ್ಕೆ ಪಾಠ ಕಲಿಸಿ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು.

ಸೋಲಿನ ಭಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಲಕ್ಷ್ಮಣ್ ಒಕ್ಕಲಿಗರೇ ಅಲ್ಲ ಎನ್ನುವ ಸುಳ್ಳು ಹರಡಿಸಿದ್ದಾರೆ. ಎಂ.ಲಕ್ಷ್ಮಣ್ ಅವರು ಒಕ್ಕಲಿಗರಾಗಿ ಹುಟ್ಟಿ ವಿಶ್ವ ಮಾನವರಾಗುವ ಹಾದಿಯಲ್ಲಿ ನಡೆಯುತ್ತಾ ಕುವೆಂಪು ಆಶಯವನ್ನು ಪಾಲಿಸುತ್ತಿದ್ದಾರೆ ಎಂದರು.

ಬೆಲೆ ಏರಿಕೆ ಈ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವು ಭಾಗ್ಯಗಳ ಕಾರ್ಯಕ್ರಮ ಜಾರಿ ಮಾಡಿದೆವು. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಎಂಟು ತಿಂಗಳಲ್ಲಿ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ಪ್ರತೀ ಫಲಾನುಭವಿ ಕುಟುಂಬಗಳಿಗೆ ತಿಂಗಳಿಗೆ 4-5 ಸಾವಿರ ಉಳಿತಾಯ ಆಗುತ್ತಿದೆ. ಇದರಿಂದ ಜನರ ಬದುಕಿನ ಸಂಕಷ್ಟ ಕಡಿಮೆಯಾಗುತ್ತಿದೆ ಎಂದರು.

ಜನರನ್ನು ಕೇವಲ ಭಾವನಾತ್ಮಕವಾಗಿ ಕೆರಳಿಸಿ ಅವರ ಬದುಕಿಗೆ ಬೆಂಕಿ ಇಡುವ ಕೆಲಸವನ್ನು ನಾವು ಮಾಡುವುದಿಲ್ಲ. ನಾವು ಜನರ ಭಾವನೆಗಳನ್ನು ಕೆರಳಿಸುವಿದಿಲ್ಲ. ಬದಲಿಗೆ ಭಾವನೆಗಳನ್ನು ಗೌರವಿಸುತ್ತಲೇ ಜನರ ಬದುಕನ್ನು ಸುಧಾರಿಸಲು ಕಾರ್ಯಕ್ರಮ ರೂಪಿಸುತ್ತೇವೆ ಎಂದು ಸೂಚಿಸಿದರು.

";