ಬೆಂಗಳೂರು: ರಾಜ್ಯದ ಪಾಲಿನ ಹಣವನ್ನು ಕೇಂದ್ರ ಸರ್ಕಾರ ನೀಡಬಹುದು ಎಂಬ ವಿಶ್ವಾಸವಿದ್ದು, ಕೇಂದ್ರ ಸರ್ಕಾರವು ಅದರ ಮಾನದಂಡದಂತೆ ಕೂಡ ರಾಜ್ಯಕ್ಕೆ ಹಣ ನೀಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಆರೋಪಿಸಿದರು.
ಈ ಕಾರಣಕ್ಕಾಗಿ ದೆಹಲಿಯ ಜಂತರ್ ಮಂತರ್ನಲ್ಲಿ ಇಡೀ ಕರ್ನಾಟಕ ಸರ್ಕಾರ ಧರಣಿ ನಡೆಸಲಿದೆ ಎಂದು ಉಭಯ ನಾಯಕರು ತಿಳಿಸಿದ್ದು, ವಿಧಾನಸೌಧದಲ್ಲಿ ಸೋಮವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರದ ವಿರುದ್ಧ ನಾವು ಧ್ವನಿ ಎತ್ತಲೇಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿದರು.
ದೆಹಲಿಯಲ್ಲಿ ನಮ್ಮ ಇಡೀ ಸರ್ಕಾರ ಪ್ರತಿಭಟನೆ ಮಾಡಲಿದ್ದು, ಈ ಪ್ರತಿಭಟನೆಯಲ್ಲಿ ಎಲ್ಲಾ ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಪ್ರತಿಭಟನೆಯಲ್ಲಿ ಎಲ್ಲಾ ಸಂಸದರು ಕೂಡ ಭಾಗಿಯಾಗಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು. ಬರಗಾಲದ ಪರಿಹಾರ ಹಣವನ್ನೂ ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದರು.
ಜಂಟಿ ಪತ್ರಿಕಾಗೋಷ್ಠಿ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿದ ಸಿದ್ದರಾಮಯ್ಯ, ಮೋದಿ ಸುಳ್ಳುಗಳಿಗೆ ನೀವು ಯಾರು ದಾರಿ ತಪ್ಪಲ್ಲ ಎಂಬುದಾಗಿ ನಂಬಿಕೆ ಇಟ್ಟುಕೊಂಡಿದ್ದೇನೆ. 4,530 ಕೋಟಿ ರೂಪಾಯಿ ಹಣ ಈಗ ಶಕ್ತಿ ಯೋಜನೆಗೆ ಕೊಟ್ಟಿದ್ದೇವೆ ಎಂದರು.