ಬಾಗಲಕೋಟೆ
ಇತ್ತೀಚಿಗೆ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು ಸದರಿ ರಸ್ತೆ ಅಪಘಾತ ಪ್ರಕರಣಗಳಲ್ಲಿ ದ್ವಿಚಕ್ರ ವಾಹನ ಸವಾರರು ಹಾಗೂ ಲಘು ವಾಹನಗಳ ಚಾಲಕರು ಮಾರಣಾಂತಿಕವಾಗಿ ಹಾಗೂ ಗಂಭೀರ ಗಾಯವನ್ನು ಹೊಂದುತ್ತಿರುವುದು ಕಂಡು ಬಂದಿರುತ್ತದೆ.
ಆದುದರಿಂದ, ದ್ವಿಚಕ್ರ ವಾಹನ ಸವಾರರು ಹಾಗೂ ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿಕೊಂಡು ವಾಹನ ಚಾಲನೆ ಮಾಡುವುದು ಕಡ್ಡಾಯವಾಗಿದೆ.
ಮತ್ತು ಕಾರು, ವಾಹನ (ಲಘು ವಾಹನ) ಚಾಲಕರು ಸೀಟ್ ಬೆಲ್ಟ್ ಧರಿಸಿ ವಾಹನ ಚಲಾಯಿಸುವುದು ಕಡ್ಡಾಯವಾಗಿರುತ್ತದೆ.
ರಸ್ತೆ ಅಪಘಾತ ಪ್ರಕರಣಗಳಲ್ಲಿನ ಸಾವು ಮತ್ತು ಗಂಭೀರ ಗಾಯ, ಪೆಟ್ಟು ಹೊಂದುವವರನ್ನು ನಿಯಂತ್ರಣ ಮಾಡುವ ದೃಷ್ಟಿಯಿಂದ ಸದರಿ ಸಂಚಾರ ನಿಯಮವನ್ನು ಉಲ್ಲಂಘಿಸುವವರ ಮೇಲೆ ಮೋಟಾರು ವಾಹನಗಳ ಕಾಯಿದೆ ಅಡಿಯಲ್ಲಿ ಕಟ್ಟುನಿಟ್ಟಾಗಿ ಕ್ರಮ ಕೈಕೊಳ್ಳಲು ಈಗಾಗಲೇ ಜಿಲ್ಲೆಯ ಎಲ್ಲ ಅಧೀನ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಸಾರ್ವಜನಿಕರು ಸಹಕರಿಸಲು ಎಸ್.ಪಿ ಅಮರನಾಥ ರೆಡ್ಡಿ ತಿಳಿಸಿದ್ದಾರೆ.