ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ:ಸ್ವಾಮೀಜಿ ಸ್ವಾಗತ
ನಿಮ್ಮ ಸುದ್ದಿ ಬಾಗಲಕೋಟೆ
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚಿಸಿರುವುದನ್ನು ಪಂಚಮಸಾಲಿ ಜಗದ್ಗುರುಗಳಾಗಿ ತುಂಬು ಹೃದಯದಿಂದ ಸ್ವಾಗತ ಮಾಡುತ್ತೇವೆ ಎಂದು ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಸರಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.
ಸರ್ಕಾರ ನಮ್ಮ ವೀರಶೈವ ಲಿಂಗಾಯತ ಸಮುದಾಯಕ್ಕೆ ಕೊಟ್ಟ ಅತಿದೊಡ್ಡ ಕೊಡುಗೆ ಇದು.
ವೀರಶೈವ ಲಿಂಗಾಯತ ಸಮುದಾಯದ ಪರವಾಗಿ ನಾವೆಲ್ಲ ಮಠಾಧೀಶರು ಮೊದಲಿನಿಂದಲೂ ಅಭಿವೃದ್ಧಿ ಕೆಲಸಗಳಿಗಾಗಿ ಬೇಡಿಕೆ ಇಡುತ್ತಲೇ ಬಂದಿದ್ದೇವೆ.
ಯಡಿಯೂರಪ್ಪನವರ ಸರ್ಕಾರ ಬಂದಾಗಲೆಲ್ಲ ಆ ಬೇಡಿಕೆಗಳಿಗೆ ಸ್ಪಂದನೆ ಸಿಕ್ಕಿದೆ. ಈಗಲೂ ಅಭಿವೃದ್ಧಿ ನಿಗಮ ಸ್ಥಾಪನೆ ಮೂಲಕ ಕೊಡುಗೆ ನೀಡಿದ್ದಾರೆ.
ವೀರಶೈವ ಲಿಂಗಾಯತ ಪರಂಪರೆಯಲ್ಲಿ ಬಹುಪಾಲು ಪಂಚಮಸಾಲಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಅಭಿವೃದ್ಧಿ ನಿಗಮ ಸ್ಥಾಪನೆಯಿಂದ ಪಂಚಮಸಾಲಿ ಸಮುದಾಯಕ್ಕೆ ಅನುಕೂಲವೇ ಆಗಲಿದೆ.
ಅಭಿವೃದ್ಧಿ ನಿಗಮ ಸ್ಥಾಪನೆಯಾಗಿದೆ. ಆರ್ಥಿಕ, ಸಾಮಾಜೀಕ, ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಮೀಸಲಿಡುವಂತೆ ನಾವು ಒತ್ತಾಯ ಮಾಡುತ್ತೇವೆ.
ಅದರ ಜೊತೆಗೆ ಕಿತ್ತೂರು ರಾಣಿ ಚನ್ನಮ್ಮ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ನಮ್ಮ ಬಹುದಿನಗಳ ಬೇಡಿಕೆಯಿದೆ. ಅದನ್ನೂ ಮಾನ್ಯ ಮುಖ್ಯಮಂತ್ರಿಗಳು ಆದಷ್ಟು ಬೇಗ ಸ್ಥಾಪನೆ ಮಾಡೋ ಮೂಲಕ ಬೇಡಿಕೆಗೆ ಸ್ಪಂದಿಸಬೇಕು.
ಇನ್ನೂ ಹೈದರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ ಹಾಗೆ ಮುಂಬೈ ಕರ್ನಾಟಕವನ್ನ ಕಿತ್ತೂರು ಕರ್ನಾಟಕ ಅಂತಾ ನಾಮಕರಣ ಮಾಡುವಂತೆಯೂ ಈ ಮೂಲಕ ಒತ್ತಾಯ ಮಾಡುತ್ತೇವೆ.
ಒಟ್ಟಾರೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಯನ್ನ ನಾವು ತುಂಬುಹೃದಯದಿಂದ ಸ್ವಾಗತ ಮಾಡುತ್ತೇವೆ ಎಂದು ತಿಳಿಸಿದ್ದಾರೆ.