This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Local NewsState News

ಮಹಿಳೆಯರಿಗೆ ಕಾನೂನು ಅರಿವು ಅಗತ್ಯ : ನ್ಯಾ.ದ್ಯಾವಪ್ಪ

ಮಹಿಳೆಯರಿಗೆ ಕಾನೂನು ಅರಿವು ಅಗತ್ಯ : ನ್ಯಾ.ದ್ಯಾವಪ್ಪ

ಬಾಗಲಕೋಟೆ

ಕೌಟುಂಬಿಕ, ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯಗಳಿಗೆ ಒಳಗಾಗುತ್ತಿರುವ ಮಹಿಳೆಯರಿಗೆ ಕಾನೂನು ಅರಿವು ಅಗತ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದ್ಯಾವಪ್ಪ ಎಸ್.ಬಿ ಹೇಳಿದರು.

ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಮಹಿಳಾ ಸದಸ್ಯರುಗಳಿಗೆ ಜಿಲ್ಲಾ ಮಟ್ಟದ ಲಿಂಗತ್ವ ಅಭಿಯಾನ, ಕಾನೂನು ಅರಿವು ಹಾಗೂ ಮತದಾರರ ನೋಂದಣಿ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಲಿಂಗ ಅಸಮಾನತೆ, ತಾರತಮ್ಯದಿಂದ ಸಮಾಜದಲ್ಲಿ ಮಹಿಳೆ ಆರ್ಥಿಕವಾಗಿ, ಸಾಮಾಜಿಕವಾಗಿ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿಲ್ಲ. ಮಹಿಳೆಯರು ಶಿಕ್ಷಣ ಹೊಂದಬೇಕು. ಸಂವಿಧಾನದಲ್ಲಿ ನೀಡಲಾದ ಎಲ್ಲ ರೀತಿಯ ಹಕ್ಕುಗಳನ್ನು ಪಡೆಯಬೇಕು. ಮಹಿಳೆಯರ ರಕ್ಷಣೆಗಾಗಿಯೇ ಅನೇಕ ಕಾನೂನುಗಳು ಇವೆ. ಕಾನೂನು ಉಲ್ಲಂಘನೆ ಮಾಡಿದವರಿಗೆ ಶಿಕ್ಷೆ ಎಲ್ಲರಿಗೂ ಇರುತ್ತದೆ. ಆದ್ದರಿಂದ ಮಹಿಳೆ ಸ್ವಾವಲಂಬಿಯಾಗಿ ಬದುಕಲು ಒಗ್ಗೂಡುವ ಮಾಡುವ ಮೂಲಕ ಸಂಘಟನೆಯಾಗಿ ಮುಂದೆ ಬರಬೇಕು ಎಂದರು.

ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ ಸಮಾಜದಲ್ಲಿರುವ ಪ್ರತಿಯೊಬ್ಬರೂ ಸ್ವಾವಲಂಭಿ ಜೀವನ ನಡೆಸಬೇಕು. ಮಹಿಳೆಯರು ಶಿಕ್ಷಣವಂತರಾಗಬೇಕು. ಹೆಣ್ಣು ಮಕ್ಕಳು ಶಾಲೆಗಳಿಗೆ ಹೋಗುತ್ತಿದ್ದಾರೆಯೇ, ಎಷ್ಟನೇ ತರಗತಿಯವರೆಗೆ ಕಲಿಯುತ್ತಿದ್ದಾರೆ. ಈ ಬಗ್ಗೆ ಪ್ರತಿ ಗ್ರಾಮ, ನಗರ ಪ್ರದೇಶದಲ್ಲಿ ಅಂಕಿ ಅಂಶಗಳ ಮಾಹಿತಿ ಕಲೆ ಹಾಕಬೇಕು. ಈ ಮಾಹಿತಿ ದೊರೆತಲ್ಲಿ ವಿಶ್ಲೇಷಣೆ ಮಾಡಲು ಅನುಕೂಲವಾಗುತ್ತದೆ. ಬಾಲ್ಯವಿವಾಹದಂತಹ ಪಿಡುಗನ್ನು ಜಾಗೃತಿ ಮಾಡದೇ ಹೊರತು ತಡೆಯಲು ಸಾಧ್ಯವಾಗುವದಿಲ್ಲವೆಂದರು. ಈ ಬಗ್ಗೆ ಮಾರ್ಗದರ್ಶನ, ಸಂದೇಶ ನೀಡಬೇಕಿದೆ. ನಿಮ್ಮ ಮೂಲಕ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವ ಉದ್ದೇಶವೇ ಈ ಕಾರ್ಯಕ್ರಮವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮಾತನಾಡಿ ಮಹಿಳೆಯರಲ್ಲಿ ವ್ಯಕ್ತಿತ್ವ ವಿಕಸನ ಅಗತ್ಯವಾಗಿದ್ದು, ಶಿಕ್ಷಣ ಮತ್ತು ಅವಕಾಶಗಳನ್ನು ಬಳಸಿಕೊಂಡು ವ್ಯಕ್ತಿತ್ವ ಸದೃಡಗೊಳಿಸಬೇಕು. ಇಲ್ಲವಾದರೆ ಏನು ಮಾಡಲು ಸಾಧ್ಯವಾಗದು. ವರ್ಣ ಬೇಧ, ಲಿಂಗ ತಾರತಮ್ಯ ಬಡವ-ಶ್ರೀಮಂತ ಎಂಬುದು ಇರಬಾರದು. ಅದನ್ನು ಹೋಗಲಾಡಿಸಲು ಡಾ.ಬಿ.ಆರ್.ಅಂಬೇಡ್ಕರ ಸಂವಿಧಾನ ರಚಿಸಿದ್ದಾರೆ. ಸಂವಿಧಾನದ ಮೂಲಕ ನಾವೆಲ್ಲರೂ ಸಮಾನರು. ಅದನ್ನು ಅಳವಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಸಾಧನೆಗೆ ಮನೆಯಲ್ಲಿರುವ ಸದಸ್ಯರು ಕಾರಣರಾಗಿರುತ್ತಾರೆ ಎಂದರು.

ದೇಶ ಕಟ್ಟುವ ಸಂವಿಧಾನಿಕ ಹಕ್ಕು ಎಲ್ಲರೂ ಪಡೆಯಬೇಕು. 18 ವರ್ಷ ಪೂರೈಸಿದ ಪ್ರತಿಯೊಬ್ಬ ಯುವಕ, ಯುವತಿಯರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿ ಹಕ್ಕು ಚಲಾಯಿಸಲು ಮುಂದಾಗಬೇಕು. ಎಲ್ಲರಿಗೂ ಶಿಕ್ಷಣ ಅಗತ್ಯವಾಗಿದ್ದು, ಕೇವಲ ಉದ್ಯೋಗಕಲ್ಲ. ಸಮಾಜ ಸುಧಾರಣೆ, ಅಭಿವೃದ್ದಿಗೆ ಮುಂದಾಗಬೇಕು. ಮನೆಯ ಮಕ್ಕಳ ಗಂಡನ ಏಳಿಗೆ ಬಗ್ಗೆ ಯೋಜನೆ ಮಾಡುವವರು ದೇಶ ಕಟ್ಟುವ ಮತದಾನದ ಮಹತ್ವದ ಬಗ್ಗೆ ಯೋಜನೆ ಮಾಡುತ್ತಿಲ್ಲ. ಇದರಿಂದ ಮತದಾರರ ಪಟ್ಟಿಯಲ್ಲಿ ಹೆಣ್ಣು-ಗಂಡುಗಳ ನೊಂದಣಿಯಲ್ಲಿ ವ್ಯತ್ಯಾಸ ಕಂಡುಬರುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮತದಾರರ ಪಟ್ಟಿ ಸೇರ್ಪಡೆಯ ಜಾಗೃತಿಯ ಪೋಸ್ಟರಗಳನ್ನು ಬಿಡುಗಡೆ ಮಾಡಲಾಯಿತು. ಅಲ್ಲದೇ ಲಿಂಗತ್ವ ಸಂವೇದನೆ ಪ್ರತಿಜ್ಞೆ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಜಿ.ಪಂ ಯೋಜನಾ ನಿರ್ದೇಶಕ ಎನ್.ವಾಯ್.ಬಸರಿಗಿಡದ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಅಮರೇಶ ಎಚ್, ಜಿ.ಪಂ ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

*ನಗರಸಭೆ ಆಯ-ವ್ಯಯ : 8 ರಂದು ಪೂರ್ವಭಾವಿ ಸಭೆ*

ಬಾಗಲಕೋಟೆ:

ಬಾಗಲಕೋಟೆ ನಗರಸಭೆಯ 2024-25ನೇ ಸಾಲಿನ ಆಯ-ವ್ಯಯ ಸಾರ್ವಜನಿಕರ ತಯಾರಿಸಲು ಆಡಳಿತಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಡಿಸೆಂಬರ 8 ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಸಭಾಭವನದಲ್ಲಿ ಆಯ-ವ್ಯಯ ಮಂಡನೆಯ ಪೂರ್ವಭಾವಿ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ. ಸದರಿ ಸಭೆಗೆ ನಗರದ ಅಭಿವೃದ್ದಿ ಯೋಜನೆಗಳ ಕುರಿತು ನಗರದ ಗಣ್ಯವ್ಯಕ್ತಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವರ್ತಕರು, ನಿವೃತ್ತ ನೌಕರರು, ಪತ್ರಕರ್ತರು, ಹಿರಿಯ ನಾಗರಿಕರು ಹಾಜರಾಗಿ ಸಲಹೆ, ಸೂಚನೆ ನೀಡುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Nimma Suddi
";