ನಿಮ್ಮ ಸುದ್ದಿ ಬಾಗಲಕೋಟೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆಹಾರ, ಜಿಲ್ಲಾ ಗ್ರಾಹಕರ ಆಯೋಗ, ಕಾನೂನು ಮಾಪನಶಾಸ್ತç ಇಲಾಖೆ, ಶಿಕ್ಷಣ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಮಾರ್ಚ ೨೦ ರಂದು ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನೂತನ ಜಿ.ಪಂ ಸಭಾಭವನದಲ್ಲಿ ಬೆಳಿಗ್ಗೆ ೧೦ ಗಂಟೆಗೆ ಜರುಗಲಿರುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಶಾರದಾ ಕೆ. ವಹಿಸಲಿದ್ದು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ ಕರಪತ್ರ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ ಸಿಇಓ ಟಿ.ಭೂಬಾಲನ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಸುಮಂಗಲಾ ಹದ್ಲಿ, ರಂಗನಗೌಡ ದಂಡಣ್ಣವರ ಸೇರಿದಂತೆ ಡಿಡಿಪಿಐ ಎಸ್.ಎಸ್.ಬಿರಾದಾರ, ಡಿಡಿಪಿಯು ಶಶಿಧರ ಪೂಜಾರ ಉಪಸ್ಥಿತರಿರುವರು. ನ್ಯಾಯವಾದಿ ಅರುಣಾ ರಘುವೀರ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.