ದ್ವನಿವರ್ಧಕ ಮೂಲಕ ಜಾಗೃತಿಗೆ ಚಾಲನೆ
ನಿಮ್ಮ ಸುದ್ದಿ ಬಾಗಲಕೋಟೆ
ಕೋವಿಡ್ ಹಿನ್ನಲೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ತಂಬಾಕು ದುಷ್ಪರಿಣಾಮ ಕುರಿತು ದ್ವನಿವರ್ಧಕ ಅಳವಡಿಸಿದ ಜಾಗೃತಿ ವಾಹನಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾಡ ಡಾ.ಎ.ಎನ್.ದೇಸಾಯಿ ಮಂಗಳವಾರ ಚಾಲನೆ ನೀಡಿದರು.
ಜಿಲ್ಲಾಡಳಿತ ಭವನದ ಆವರಣದಲ್ಲಿ ಜಾಗೃತಿಗೆ ಚಾಲನೆ ನೀಡಿ ಮಾತನಾಡಿದ ಅವರು ತಂಬಾಕು ಸೇವನೆಯಿಂದ ಅನೇಕ ರೋಗಗಳಿಗೆ ತುತ್ತಾಗಬೇಕಾಗುತ್ತದೆ. ತಂಬಾಕು ಸೇವನೆಯಿಂದಾಗು ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ವರ್ಷದ ದ್ಯೇಯ ವಾಕ್ಯವಾದ ತ್ಯಜಿಸಲು ಬದ್ದರಾಗಿ ದಿನಾಚರಣೆ ಕರೆ ನೀಡಲಾಗುತ್ತಿದೆ. ಕೊರೊನಾದಿಂದ ಸಾಕಷ್ಟು ಜನ ತೊಂದರೆಗೆ ಈಡಾಗುತ್ತಿದ್ದು, ತಂಬಾಕು ಉತ್ಪನ್ನಗಳನ್ನು ಅಗದು ಉಗುಳುವುದರಿಂದ ಸೋಂಕು ಹರಡುತ್ತದೆ. ಹಾಗಾಗಿ ತಂಬಾಕು ತ್ಯಜಿಸುವದರಿಂದ ಕೋವಿಡ್ ನಿಯಂತ್ರಿಸಲು ಸಾದ್ಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ. ಕುಸುಮಾ ಮಾಗಿ, ಜಿಲ್ಲಾ ತಂಬಾಕು ಸಲಹೆಗಾರ ಶಶಿಕಾಂತ ಕಮಟಳ್ಳಿ, ಸಮಾಜ ಕಾರ್ಯಕರ್ತ ಶಿವಲಿಂಗ ಕರಗಣ್ಣೆ ಸೇರಿದಂತೆ ಇತರರು ಉಪಸ್ಥಿತರಿದ್ದರು.