This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ಸಕ್ಕರೆ ಕಾರ್ಖಾನೆ ಬಂದ್​ ಆದೇಶಕ್ಕೆ ಹೈಕೋರ್ಟ್ ತಡೆ; ಸರ್ಕಾರದ ಷಡ್ಯಂತ್ರಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದ ಯತ್ನಾಳ್

ಸಕ್ಕರೆ ಕಾರ್ಖಾನೆ ಬಂದ್​ ಆದೇಶಕ್ಕೆ ಹೈಕೋರ್ಟ್ ತಡೆ; ಸರ್ಕಾರದ ಷಡ್ಯಂತ್ರಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದ ಯತ್ನಾಳ್

ಕಲಬುರಗಿ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಬಂದ್​ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ ಎಂದು ಮಾಹಿತಿ ತಿಳಿದು ಬಂದಿದೆ.

ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿ‌ನ್ನಲೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಯತ್ನಾಳ್ ಒಡೆತನದ ಸಿದ್ದ ಶ್ರೀ ಸಕ್ಕರೆ ಕಾರ್ಖಾನೆ ಬಂದ್​ಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇತ್ತೀಚೆಗೆ ಆದೇಶಿಸಿತ್ತು.ಸದ್ಯ, ಮಂಡಳಿ ಆದೇಶಕ್ಕೆ ಹೈಕೋರ್ಟ್​ನಿಂದ ತಡೆ ಸಿಕ್ಕಿರುವ ಹಿನ್ನೆಲೆ ಎಕ್ಸ್​ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ ಯತ್ನಾಳ್, ಸತ್ಯ ಮೇವ ಜಯತೆ ಎಂದು ಹೇಳಿದ್ದಾರೆ.

ಅಲ್ಲದೆ, ಸರ್ಕಾರದ ಷಡ್ಯಂತ್ರಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದಿದ್ದಾರೆ.ಸದ್ಯ, ಮಂಡಳಿ ಆದೇಶಕ್ಕೆ ಹೈಕೋರ್ಟ್​ನಿಂದ ತಡೆ ಸಿಕ್ಕಿರುವ ಹಿನ್ನೆಲೆ ಎಕ್ಸ್​ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ ಯತ್ನಾಳ್, ಸತ್ಯ ಮೇವ ಜಯತೆ ಎಂದು ಹೇಳಿದ್ದು, ಸರ್ಕಾರದ ಷಡ್ಯಂತ್ರಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದಿದ್ದಾರೆ ಎಂದು ತಿಳಿದು ಬಂದಿದೆ.

Nimma Suddi
";