This is the title of the web page
This is the title of the web page

Live Stream

January 2025
S M T W T F S
 1234
567891011
12131415161718
19202122232425
262728293031  

| Latest Version 9.4.1 |

State News

ಬವಿವ ಸಂಘದ ಮೈದಾನದಲ್ಲಿ ಯೋಗಾಥಾನ್

ಉತ್ತಮ ಜೀವನಕ್ಕೆ ಯೋಗ ಅವಶ್ಯ : ಗದ್ದಿಗೌಡರ

ನಿಮ್ಮ ಸುದ್ದಿ ಬಾಗಲಕೋಟೆ

ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯವಂತರಾಗಿರಲು ಯೋಗ ಅವಶ್ಯವಾಗಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ತಿಳಿಸಿದರು.

ನಗರದ ಬಸವೇಶ್ವರ ವಿದ್ಯಾವರ್ಧಕ ಸಂಘದ ಮೈದಾನದಲ್ಲಿ ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಆಯುಷ, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಯೋಗ ಸಂಸ್ಥೆ ಸಹಯೋಗದಲ್ಲಿ ಗಿನ್ನಿಸ್ ದಾಖಲೆ ನಿರ್ಮಿಸಲು ಹಮ್ಮಿಕೊಂಡ ಯೋಗಾಥಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯೋಗದ ಮಹತ್ವವನ್ನು ತಿಳಿಸುವ ಮೂಲಕ ಗಿನ್ನೀಸ್ ದಾಖಲೆ ಮಾಡುವ ನಿಟ್ಟಿನಲ್ಲಿ ರಾಜ್ಯದ ಯೋಗಾಥಾನ್ ಹಮ್ಮಿಕೊಂಡಿರುವುದ ಮಹತ್ವದ ಕೆಲಸ. ಯೋಗ ದೈಹಿಕ, ಮಾನಸಿಕ ಸಮತೋಲನದ ಜೊತೆಗೆ ದೇಹ ಮತ್ತು ಮನಸ್ಸನ್ನು ಶಾಂತಗೊಳಿಸುತ್ತದೆ. ಯೋಗ ಮುಖ್ಯವಾಗಿ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಸಂಶೋದಕರಿಗೆ ಪ್ರಯೋಜನಕಾರಿಯಾಗಿದೆ. ಯುವಕರು ತಮ್ಮ ನಿತ್ಯ ಜೀವನದಲ್ಲಿ ಯೋಗ ಮಾಡುವದರಿಂದ ಸಾರ್ಥಕತೆಯ ಜೀವನ ಪಡೆಯಬಹುದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವೀರಣ್ಣ ಚರಂತಿಮಠ ಮಾತನಾಡಿ ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಯೋಗವನ್ನು ಜಗತ್ತಿಗೆ ಪರಿಚಯಿಸಿದ್ದಾರೆ. ಯುವ ಪೀಳಿಗೆಗಾಗಿಯೇ ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಯುವಜಯೋತ್ಸವ ಕಾರ್ಯಕ್ರಮ ನಡೆಸಲಾಯಿತು. ಸರಕಾರ ಕ್ರೀಡಾಕೂಟಕ್ಕು ಹೆಚ್ಚು ಒತ್ತು ನೀಡುತ್ತಿರುವದರಿಂದ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿದ್ದಾರೆ. ನಿತ್ಯ ಜೀವನದಲ್ಲಿ ಯೋಗಾಬ್ಯಾಸ ಮಾಡುವದರಿಂದ ಕ್ಯಾನ್ಸರ್, ಮಧುಮೇಹ, ಅಧಿಕ ರಕ್ತದೊತ್ತಡ, ಹೃದ್ರೋಗ ಸೇರಿದಂತೆ ಮುಂತಾದ ಕಾಯಿಲೆಗಳಿಂದ ರಕ್ಷಿಸಿಕೊಳ್ಳಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬುಡಾದ ಅಧ್ಯಕ್ಷ ಬಸವಲಿಂಗಪ್ಪ ನಾವಲಗಿ, ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ, ಜಿ.ಪಂ ಸಿಇಓ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಎನ್.ಐ.ಸಿಯ ಗಿರಿಯಾಚಾರ, ಜಿಲ್ಲಾ ಆಯುಷ ಅಧಿಕಾರಿ ಅಕ್ಕಮಹಾದೇವಿ ಗಾಣಿಗೇರ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ಬವಿವ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಕಾಲೇಜು ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಸೂಳಿಭಾವಿ, ವೈದ್ಯಕೀಯ ಆಡಳಿತ ಮಂಡಳಿಯ ಕಾರ್ಯಾದ್ಯಕ್ಷ ಅಶೋಕ ಸಜ್ಜನ ಸೇರಿದಂತೆ ಇತರರು ಉಪಸ್ಥಿತರಿದ್ದರು.

Nimma Suddi
";